Genesis 35:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು, ನೀನು ಬಹು ಸಂತಾನವುಳ್ಳವನಾಗಿ ಹೆಚ್ಚುವೆ, ನಿನ್ನಿಂದ ಜನಾಂಗವೂ, ಜನಾಂಗಗಳ ಗುಂಪು ಉಂಟಾಗುವುದು. ಅನೇಕ ಜನಾಂಗಗಳ ಅರಸರು ನಿನ್ನಿಂದ ಹುಟ್ಟುವರು.
Kannada BSI Bible 2016
ದೇವರು ಅವನಿಗೆ ಹೇಳಿದ್ದೇನಂದರೆ--ಸರ್ವಶಕ್ತನಾದ ದೇವರು ನಾನೇ, ನೀನು ಅಭಿವೃದ್ಧಿಯಾಗಿ ಹೆಚ್ಚಾಗು; ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು; ಅರಸರು ನಿನ್ನಿಂದ ಹುಟ್ಟುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.
Kannada Bible (KNCL) BSI 2016
ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.