Genesis 35:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ ‘ಬೇತೇಲ್’ ಎಂದು ಹೆಸರಿಟ್ಟನು. (Verses 14-15)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
Kannada BSI Bible 2016
ಯಾಕೋಬನು ತನ್ನ ಸಂಗಡ ಮಾತನಾಡಿದ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಪಾನಾರ್ಪಣೆಮಾಡಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ತನ್ನ ಸಂಗಡ ದೇವರು ಮಾತಾಡಿದ ಸ್ಥಳದಲ್ಲಿ ಕಲ್ಲಿನ ಕಂಬವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೇ ಹೊಯಿದನು.
Kannada Bible (KNCL) BSI 2016
ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.