Genesis 35:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೆತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬೇತೇಲಿನಿಂದ ಪ್ರಯಾಣಮಾಡುತ್ತಿರಲು ಎಫ್ರಾತಿಗೆ ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ಪ್ರಸವ ವೇದನೆಯಿಂದ ನರಳಿದಳು.
Kannada BSI Bible 2016
ಬೇತೇಲಿನಿಂದ ಅವರು ಪ್ರಯಾಣಮಾಡಿ ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ ರಾಹೇಲಳು ಪ್ರಸವವೇದನೆಪಡುತ್ತಾ ಕಷ್ಟಪಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಬೇತೇಲಿನಿಂದ ಪ್ರಯಾಣ ಮಾಡುತ್ತಿರಲು ಎಫ್ರಾತೂರಿಗೆ ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳಿಗೆ ಹೆರಿಗೇ ಕಾಲಬಂತು.
Kannada Bible (KNCL) BSI 2016
ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.