Genesis 35:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳನ್ನು ಸಂಗಮಿಸಿದನು. ಈ ಸಂಗತಿಯು ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಗಂಡು ಮಕ್ಕಳಿದ್ದರು.
Kannada BSI Bible 2016
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳ ಸಂಗಡ ಮಲಗಿದನು. ಅದನ್ನು ಇಸ್ರಾಯೇಲನು ಕೇಳಿದನು. ಯಾಕೋಬನಿಗೆ ಹನ್ನೆರಡು ಮಂದಿ ಕುಮಾರರು ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.
Kannada Bible (KNCL) BSI 2016
ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.