Genesis 35:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
Kannada BSI Bible 2016
ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋಗಲು ದೇವರು ಅಲ್ಲೇ ಅವನಿಗೆ ಪ್ರತ್ಯಕ್ಷನಾದದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.