Genesis 35:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ರೆಬೆಕ್ಕಳ ದಾಸಿಯಾದ ದೆಬೋರಳು ಸತ್ತು ಹೋದಾಗ, ಅವರು ಆಕೆಯನ್ನು ಬೇತೇಲಿನ ತಗ್ಗಿನಲ್ಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿದರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
Kannada BSI Bible 2016
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಸತ್ತಳು. ಬೇತೇಲಿನ ಕೆಳಗಿದ್ದ ಅಲ್ಲೋನ್‌ ಮರದ ಬುಡದಲ್ಲಿ ಆಕೆಯನ್ನು ಹೂಣಿಟ್ಟರು. ಆ ಸ್ಥಳಕ್ಕೆ ಅಲ್ಲೋನ್‌ ಬಾಕೂತ್‌ ಎಂದು ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ರೆಬೆಕ್ಕಳ ದಾದಿಯಾದ ದೆಬೋರಳು ಸತ್ತುಹೋಗಲು ಅವರು ಆಕೆಗೆ ಬೇತೇಲಿನ ತಗ್ಗಿನಲಿರುವ ಅಲ್ಲೋನ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಿಟ್ಟರು.
Kannada Bible (KNCL) BSI 2016
ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.