Genesis 36:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನ ಮಕ್ಕಳ ಹೆಸರುಗಳು ಯಾವುವೆಂದರೆ: ಎಲೀಫಜನು, ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು. ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
Kannada BSI Bible 2016
ಏಸಾವನ ಕುಮಾರರ ಹೆಸರುಗಳು ಯಾವವಂದರೆ: ಏಸಾವನ ಹೆಂಡತಿಯಾಗಿರುವ ಆದಾಳ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿಯಾದ ಬಾಸೆಮತಳ ಮಗನಾದ ರೆಗೂವೇಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನ ಮಕ್ಕಳ ಹೆಸರುಗಳು ಯಾವವೆಂದರೆ - ಎಲೀಫಜನು ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಗನು; ರೆಗೂವೇಲನು ಏಸಾವನ ಹೆಂಡತಿಯಾದ ಬಾಸೆಮತಳ ಮಗನು.
Kannada Bible (KNCL) BSI 2016
ಏಸಾವನಿಗೆ ಹೆಂಡತಿ ಆದಾಳಲ್ಲಿ ಮಗ ಎಲೀಫಜನು ಹುಟ್ಟಿದನು; ಹೆಂಡತಿ ಬಾಸೆಮತಳಲ್ಲಿ ಮಗ ರೆಗೂವೇಲನು ಹುಟ್ಟಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.