Genesis 36:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಿಮ್ನ ಎಂಬವಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿಯಾಗಿದ್ದು ಆಕೆಯು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಮಕ್ಕಳು.
Kannada BSI Bible 2016
ತಿಮ್ನಳು ಏಸಾವನ ಮಗನಾದ ಎಲೀಫಜನಿಗೆ ಉಪಪತ್ನಿ ಯಾಗಿದ್ದು ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾಳ ಕುಮಾರರು ಇವರೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಿಮ್ನ ಎಂಬವಳು ಏಸಾವನ ಮಗನಾದ ಏಲೀಫಜನಿಗೆ ಉಪಪತ್ನಿಯಾಗಿದ್ದು ಅವನಿಗೆ ಅಮಾಲೇಕನನ್ನು ಹೆತ್ತಳು ಇವರೇ ಏಸಾವನ ಹೆಂಡತಿಯಾದ ಆದಾ ಎಂಬಾಕೆಯ ಸಾಲಿನವರು.
Kannada Bible (KNCL) BSI 2016
ಏಸಾವನ ಮಗನಾದ ಈ ಎಲೀಫಜನಿಗೆ ತಿಮ್ನ ಎಂಬ ಉಪಪತ್ನಿ ಇದ್ದಳು. ಇವಳು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿ ಆದಾಳ ಮೊಮ್ಮಕ್ಕಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.