Genesis 36:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರೆಂದರೆ: ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳಿಗೆ ಹುಟ್ಟಿದ ಮೊಮ್ಮಕ್ಕಳು.
Kannada BSI Bible 2016
ಏಸಾವನ ಮಗನಾದ ರೆಗೂವೇಲನ ಕುಮಾರರು ಯಾರಂದರೆ: ನಹತ್‌, ಜೆರಹ, ಶಮ್ಮಾ, ಮಿಜ್ಜಾ; ಎದೋಮ್‌ ದೇಶದಲ್ಲಿದ್ದ ರೆಗೂವೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನ ಮಗನಾದ ರೆಗೂವೇಲನಿಗೆ ಹುಟ್ಟಿದವರು ಯಾರಾಂದರೆ - ನಹತಕುಲಪತಿ, ಜೆರಹಕುಲಪತಿ, ಶಮ್ಮಾಕುಲಪತಿ, ವಿುಜ್ಜಾಕುಲಪತಿ ಇವರೇ. ಇವರು ಎದೋಮ್ಯರ ದೇಶದಲ್ಲಿ ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯೊಳಗೆ ಹುಟ್ಟಿದವರು.
Kannada Bible (KNCL) BSI 2016
ಏಸಾವನ ಮಗ ರೆಗೂವೇಲನಿಗೆ ನಹತ, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ನಾಡಿನಲ್ಲಿ ಏಸಾವನ ಹೆಂಡತಿ ಬಾಸೆಮತಳ ಸಂತತಿಯಲ್ಲಿ ಹುಟ್ಟಿದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.