Genesis 36:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನ ಹೆಂಡತಿಯಾಗಿದ್ದ ಒಹೊಲೀಬಾಮಳ ಮಗಳಾದ ಅನಾಳ ಸಂತಾನದ ಕುಲನಾಯಕರು ಯಾರೆಂದರೆ: ಯೆಗೂಷ್, ಯಳಾಮ, ಮತ್ತು ಕೋರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ ಒಹೊಲೀಬಾಮಳ ಸಂತಾನದವರು.
Kannada BSI Bible 2016
ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಸಾವನ ಹೆಂಡತಿಯಾದ ಒಹೊಲೀಬಾಮಳ ಸಂತಾನದವರು ಯಾರಂದರೆ - ಯೆಗೂಷ್‍ಕುಲಪತಿ, ಯಳಾಮಕುಲಪತಿ, ಕೋರಹಕುಲಪತಿ ಇವರೇ. ಇವರು ಅನಾಹಳ ಮಗಳಾಗಿಯೂ ಏಸಾವನ ಹೆಂಡತಿಯಾಗಿಯೂ ಇದ್ದ ಒಹೊಲೀಬಾಮಳ ಸಂತಾನದವರು.
Kannada Bible (KNCL) BSI 2016
ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.