Genesis 36:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಬೆಯೋನನ ಮಕ್ಕಳು: ಅಯ್ಯಾ ಮತ್ತು ಅನಾಹ ಎಂಬವರು. ಈ ಅನಾಹನೇ ತನ್ನ ತಂದೆಯಾದ ಸಿಬಿಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಕೊಂಡವನು.
Kannada BSI Bible 2016
ಸಿಬೆಯೋನನ ಮಕ್ಕಳು ಯಾರಂದರೆ: ಅಯ್ಯಾ ಮತ್ತು ಅನಾಹ ಎಂಬವರು. ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಬೆಯೋನನ ಮಕ್ಕಳು - ಅಯ್ಯಾ, ಅನಾಹ. ಈ ಅನಾಹನೇ ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನು.
Kannada Bible (KNCL) BSI 2016
ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.