Genesis 36:43 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 40
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗ್ದೀಯೇಲ್ ಗೀರಾಮ್ ಇವರೇ ತಮ್ಮ ದೇಶದ ನಿವಾಸ ಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಈ ಎದೋಮ್ಯರ ಮೂಲ ಪುರುಷನೇ ಏಸಾವನು.
Kannada BSI Bible 2016
ಮಗ್ದೀಯೇಲ್‌ ಗೀರಾಮ್‌. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ತೇಮಾನ್‍ಕುಲಪತಿ, ವಿುಪ್ಚಾರಕುಲಪತಿ, ಮಗ್ದೀಯೇಲ್‍ಕುಲಪತಿ, ಗೀರಾಮ್‍ಕುಲಪತಿ ಇವೇ. ಇವರು ತಮ್ಮ ದೇಶದೊಳಗಣ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲಪತಿಗಳು. ಮೇಲೆ ಹೇಳಿರುವದು ಎದೋಮ್ಯರ ಮೂಲ ಪುರುಷನಾದ ಏಸಾವನ ವಂಶಸ್ಥರ ಚರಿತ್ರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.