Genesis 36:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನೂ, ಕೋರಹನನ್ನು ಹೆತ್ತಳು. ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
Kannada BSI Bible 2016
ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಹೊಲೀಬಾಮಳು ಯೆಗೂಷನನ್ನೂ ಯಳಾಮನನ್ನೂ ಕೋರಹನನ್ನೂ ಹೆತ್ತಳು. ಕಾನಾನ್‍ದೇಶದಲ್ಲಿ ಏಸಾವನಿಗೆ ಹುಟ್ಟಿದ ಮಕ್ಕಳು ಇವರೇ.
Kannada Bible (KNCL) BSI 2016
ಒಹೊಲೀಬಾಮಳು ಯೊಗೂಷನನ್ನು, ಯಳಾಮನನ್ನು ಹಾಗು ಕೋರಹನನ್ನು ಹೆತ್ತಳು. ಇವರೆಲ್ಲರು ಏಸಾವನು ಕಾನಾನ್ ನಾಡಿನಲ್ಲಿ ಇದ್ದಾಗ ಹುಟ್ಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.