Genesis 37:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
Kannada BSI Bible 2016
ಆದದರಿಂದ ಇಸ್ರಾಯೇಲನು ಯೋಸೇಫನಿಗೆ--ನಿನ್ನ ಸಹೋದ ರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ; ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು ಅಂದನು. ಅದಕ್ಕೆ ಅವನು--ನಾನು ಇಲ್ಲಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನಿಗೆ - ನಿನ್ನ ಅಣ್ಣಂದಿರು ಶೆಕೆವಿುನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ; ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ ಬಾ ಎಂದು ಹೇಳಲು ಅವನು - ಇಗೋ ಇದ್ದೇನೆ ಅಂದನು.
Kannada Bible (KNCL) BSI 2016
ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.