Genesis 37:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
Kannada BSI Bible 2016
ಯಾಕೋಬನು ಅವನಿಗೆ--ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು ಎಂದು ಹೇಳಿ ಹೆಬ್ರೋನ್ ತಗ್ಗಿನಿಂದ ಕಳುಹಿಸಿದನು. ಆಗ ಅವನು ಶೆಕೆಮಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲನು ಅವನಿಗೆ - ನೀನು ಹೋಗಿ ನಿನ್ನ ಅಣ್ಣಂದಿರ ಯೋಗಕ್ಷೇಮವನ್ನೂ ಆಡುಕುರಿಗಳ ಯೋಗಕ್ಷೇಮವನ್ನೂ ವಿಚಾರಿಸಿಕೊಂಡು ಬಾ ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನಿರುವ ತಗ್ಗಿನಿಂದ ಕಳುಹಿಸಲು ಯೋಸೇಫನು ಹೊರಟನು.
Kannada Bible (KNCL) BSI 2016
ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, \ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,