Genesis 37:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.
Kannada BSI Bible 2016
ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏನು ಹುಡುಕುತ್ತಿ ಎಂದು ವಿಚಾರಿಸಲು ಅವನು - ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ? ದಯವಿಟ್ಟು ಹೇಳು ಅಂದನು.
Kannada Bible (KNCL) BSI 2016
ಜೋಸೆಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ, ದಯವಿಟ್ಟು ಹೇಳು” ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು.