Genesis 37:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದ್ದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
Kannada BSI Bible 2016
ಆ ಮನುಷ್ಯನು--ಅವರು ಇಲ್ಲಿಂದ ಹೊರಟು ಹೋದರು. ಯಾಕಂದರೆ ಅವರು--ನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಮನುಷ್ಯನು - ಅವರು ಇಲ್ಲಿಂದ ಹೊರಟುಹೋದರು; ದೋತಾನಿಗೆ ಹೋಗೋಣ ಎಂಬದಾಗಿ ಮಾತಾಡುವದನ್ನು ಕೇಳಿದೆನು ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
Kannada Bible (KNCL) BSI 2016
ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.