Genesis 37:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.
Kannada BSI Bible 2016
ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವದಕ್ಕೆ ಒಳಸಂಚುಮಾಡಿಕೊಂಡರು.
Kannada Bible (KNCL) BSI 2016
ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.