Genesis 37:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Kannada BSI Bible 2016
ಬನ್ನಿರಿ, ಈಗ ಅವನನ್ನು ಕೊಂದು--ಯಾವದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ; ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ ದುಷ್ಟಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ ಬನ್ನಿ; ಆಗ ಅವನ ಕನಸುಗಳು ಏನಾಗುವವೋ ನೋಡೋಣ ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.