Genesis 37:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
Kannada BSI Bible 2016
ಬನ್ನಿರಿ, ಇಷ್ಮಾಯೇಲ್ಯರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಯಾಕಂದರೆ ಅವನು ನಮ್ಮ ಸಹೋದರನೂ ನಮ್ಮ ಮಾಂಸವೂ ಆಗಿದ್ದಾನೆ ಅಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
Kannada Bible (KNCL) BSI 2016
ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.