Genesis 37:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
Kannada BSI Bible 2016
ಅವನು ತನ್ನ ಸಹೋದರರ ಬಳಿಗೆ ತಿರಿಗಿಹೋಗಿ--ಆ ಮಗುವು ಇಲ್ಲವಲ್ಲಾ; ಹಾಗಾದರೆ ನಾನು ಎಲ್ಲಿಗೆ ಹೋಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಬಟ್ಟೆಗಳನ್ನು ಹರಿದುಕೊಂಡು ತನ್ನ ತಮ್ಮಂದಿರ ಬಳಿಗೆ ಬಂದು - ಆ ಹುಡುಗನು ಇಲ್ಲವಲ್ಲಾ; ಅಯ್ಯೋ, ನಾನೆಲ್ಲಿಗೆ ಹೋಗಲಿ ಎಂದು ಗೋಳಾಡಿದನು.
Kannada Bible (KNCL) BSI 2016
ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.
Recommended Reading