Genesis 37:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.
Kannada BSI Bible 2016
ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು. ಅವರು ಅದನ್ನು ಅವರ ತಂದೆಯ ಬಳಿಗೆ ತಂದು--ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ನಿಲುವಂಗಿಯನ್ನು ತಮ್ಮ ತಂದೆಗೆ ಕಳುಹಿಸಿದರು; ತಂದವರು - ಇದು ನಮಗೆ ಸಿಕ್ಕಿತು; ಇದು ನಿನ್ನ ಮಗನ ಅಂಗಿ ಹೌದೋ ಅಲ್ಲವೋ ನೋಡು ಎಂದು ಅವನಿಗೆ ಹೇಳಲು
Kannada Bible (KNCL) BSI 2016
ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.