Genesis 37:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
Kannada BSI Bible 2016
ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿನ ಮೇಲೆ ಗೋಣೀತಟ್ಟು ಸುತ್ತಿಕೊಂಡು ತನ್ನ ಮಗನಿಗಾಗಿ ಬಹುದಿನಗಳವರೆಗೂ ಹಂಬಲಿಸುತ್ತಿದ್ದನು.
Kannada Bible (KNCL) BSI 2016
ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.