Genesis 37:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.
Kannada BSI Bible 2016
ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.
Kannada Bible (KNCL) BSI 2016
ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.