Genesis 38:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರನ್ನು ಬಿಟ್ಟು ಹೀರಾ ಎಂಬುವನೊಂದಿಗೆ ವಾಸಿಸಲು ಹೋದನು. ಅವನು ಅದುಲ್ಲಾಮ್ ಊರಿನವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮಿನ ಊರಿನವನಾದ ಹೀರಾ ಎಂಬುವವನ ಹತ್ತಿರ ಉಳಿದುಕೊಂಡನು.
Kannada BSI Bible 2016
ಆ ಕಾಲದಲ್ಲಿ ಆದದ್ದೇನಂದರೆ, ಯೆಹೂದನು ತನ್ನ ಸಹೋದರರ ಬಳಿ ಯಿಂದ ಇಳಿದುಹೋಗಿ ಅದುಲ್ಲಾಮ್ಯನವನಾದ ಹೀರನ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು.
Kannada Bible (KNCL) BSI 2016
ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.