Genesis 38:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೂದನು ತನ್ನ ಸೊಸೆಯಾದ ತಾಮಾರಳಿಗೆ, “ನಿನ್ನ ತಂದೆಯ ಮನೆಗೆ ಹಿಂತಿರುಗಿ ಹೋಗಿ ಅಲ್ಲಿರು. ನನ್ನ ಮಗನಾದ ಶೇಲಹನು ದೊಡ್ಡವನಾಗುವ ತನಕ ಮದುವೆಯಾಗಬೇಡ” ಎಂದು ಹೇಳಿದನು. ಶೇಲಹನು ಸಹ ತನ್ನ ಅಣ್ಣಂದಿರಂತೆ ಸಾಯಬಹುದೆಂದು ಯೆಹೂದನು ಹೆದರಿಕೊಂಡಿದ್ದನು. ಆದ್ದರಿಂದ ತಾಮಾರಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೂದನು ಒಂದು ವೇಳೆ ಶೇಲಹನು ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ, “ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿರು” ಎಂದು ಹೇಳಿದನು. ಅವಳು ತಂದೆಯ ಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
Kannada BSI Bible 2016
ಆಗ ಯೆಹೂದನು ತನ್ನ ಸೊಸೆಯಾದ ತಾಮಾರ ಳಿಗೆ--ನನ್ನ ಮಗನಾದ ಶೇಲಹನು ದೊಡ್ಡವನಾಗುವ ವರೆಗೆ ವಿಧವೆಯಾಗಿದ್ದು ನಿನ್ನ ತಂದೆಯ ಮನೆಯಲ್ಲಿ ಇರು ಅಂದನು. ಯಾಕಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳು ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೆಹೂದನು - ಒಂದು ವೇಳೆ ಶೇಲಹನೂ ತನ್ನ ಅಣ್ಣಂದಿರಂತೆಯೇ ಸತ್ತಾನೆಂದು ಯೋಚಿಸಿ ತನ್ನ ಸೊಸೆಯಾದ ತಾಮಾರಳಿಗೆ - ನನ್ನ ಮಗನಾದ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರಮನೆಯಲ್ಲಿರು ಎಂದು ನೆವ ಹೇಳಿದನು. ಅವಳು ತೌರಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
Kannada Bible (KNCL) BSI 2016
ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.