Genesis 38:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದನು ಆ ದಾರಿಯಲ್ಲಿ ಪ್ರಯಾಣ ಮಾಡುತ್ತಿರಲು ಆಕೆಯನ್ನು ಕಂಡು ವೇಶ್ಯೆಯೆಂದು ಭಾವಿಸಿದನು. (ಆಕೆಯು ವೇಶ್ಯೆಯಂತೆ ಮುಸುಕು ಹಾಕಿಕೊಂಡಿದ್ದಳು.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು ಆಕೆಯನ್ನು ಕಂಡಾಗ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ವೇಶ್ಯಾಸ್ತ್ರೀಯೆಂದು ಭಾವಿಸಿದನು.
Kannada BSI Bible 2016
ಯೆಹೂದನು ಅವಳನ್ನು ನೋಡಿದಾಗ ಅವಳು ಮುಖಮುಚ್ಚಿಕೊಂಡಿದ್ದರಿಂದ ಅವಳು ಸೂಳೆಯೆಂದು ನೆನಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನು ಆಕೆಯನ್ನು ಕಂಡಾಗ ಆಕೆಯ ಮುಖದ ಮೇಲೆ ಮುಸುಕು ಇದ್ದದರಿಂದ ಸೊಸೆ ಎಂದು ತಿಳಿಯದೆ ಸೂಳೆಯೆಂದು ಭಾವಿಸಿ ಮಾರ್ಗದಿಂದ ಓರೆಯಾಗಿ ಆಕೆಯ ಬಳಿಗೆ ಹೋಗಿ -
Kannada Bible (KNCL) BSI 2016
ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು.