Genesis 38:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದನು, “ನನ್ನ ಮಂದೆಯಿಂದ ನಿನಗೆ ಒಂದು ಆಡುಮರಿಯನ್ನು ಕಳುಹಿಸಿಕೊಡುವೆ” ಎಂದು ಉತ್ತರಿಸಿದನು. ಅವಳು “ಸರಿ, ನೀನು ನನಗೆ ಆಡುಮರಿಯನ್ನು ಕಳುಹಿಸಿ ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸುತ್ತೇನೆ” ಅಂದಾಗ ಆಕೆ, “ನೀನು ಆದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು” ಎಂದು ಹೇಳಿದ್ದಕ್ಕೆ,
Kannada BSI Bible 2016
ಅವನು--ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿ ಸುತ್ತೇನೆ ಅಂದನು. ಅವಳು--ನೀನು ಅದನ್ನು ಕಳುಹಿಸುವವರೆಗೆ ಈಡುಕೊಡುವಿಯೋ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಹಿಂಡಿನಿಂದ ಒಂದು ಹೋತಮರಿಯನ್ನು ಕಳುಹಿಸಿಕೊಡುತ್ತೇನೆ ಅಂದಾಗ ಆಕೆ - ನೀನು ಅದನ್ನು ಕೊಡುವ ತನಕ ನನ್ನಲ್ಲಿ ಏನಾದರೂ ಒತ್ತೆಯಿಡಬೇಕು ಎಂದು ಹೇಳಿದ್ದಕ್ಕೆ
Kannada Bible (KNCL) BSI 2016
“ಹಿಂಡಿನಿಂದ ಒಂದು ಹೋತಮರಿಯನ್ನು ಕಳಿಸುತ್ತೇನೆ,” ಎಂದ ಆತ. ಆಗ ಆಕೆ, \ಅದನ್ನು ಕಳಿಸುವ ತನಕ ನನ್ನಲ್ಲಿ ಏನಾದರು ಒತ್ತೆಯಿಡಬೇಕು,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿಸುತ್ತೇನೆ,” ಎಂದನು. ಅವಳು, “ನೀನು ಅದನ್ನು ಕಳುಹಿಸುವವರೆಗೆ ಈಡು ಕೊಡುವೆಯೋ?” ಎಂದಳು.