Genesis 38:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದನು ಮಾತು ಕೊಟ್ಟಿದ್ದಂತೆಯೇ ಒಂದು ಆಡುಮರಿಯನ್ನು ತನ್ನ ಸ್ನೇಹಿತನಾದ ಹೀರಾನ ಮೂಲಕ ಏನಯಿಮಿಗೆ ಕಳುಹಿಸಿ ಆ ಮುದ್ರೆಯನ್ನೂ ಊರುಗೋಲನ್ನೂ ತೆಗೆದುಕೊಂಡು ಬರುವಂತೆ ಅವನಿಗೆ ತಿಳಿಸಿದನು. ಆದರೆ ಅವನು ಅವಳನ್ನು ಕಂಡುಹಿಡಿಯಲಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನ ಕೈಯಿಂದ ಬಿಡಿಸಿಕೊಳ್ಳುವುದಕ್ಕೊಸ್ಕರ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಿದಾಗ ಆಕೆಯು ಅವನಿಗೆ ಸಿಗಲಿಲ್ಲ.
Kannada BSI Bible 2016
ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವದಕ್ಕೋಸ್ಕರ ತನ್ನ ಸ್ನೇಹಿತನಾದ ಆ ಅದುಲ್ಲಾಮ್ಯನ ಕೈಯಲ್ಲಿ ಹೋತಮರಿಯನ್ನು ಕಳುಹಿಸಲು ಆಕೆ ಅವನಿಗೆ ಸಿಕ್ಕಲಿಲ್ಲ.
Kannada Bible (KNCL) BSI 2016
ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.