Genesis 38:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ಏನಯಿಮ್ ಊರಿನ ಕೆಲವು ಗಂಡಸರಿಗೆ, “ಇಲ್ಲಿಯ ದಾರಿಯ ಸಮೀಪದಲ್ಲಿರುತ್ತಿದ್ದ ವೇಶ್ಯೆಯು ಎಲ್ಲಿದ್ದಾಳೆ?” ಎಂದು ಕೇಳಿದನು. ಅದಕ್ಕೆ ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ” ಎಂದು ಉತ್ತರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವಳ ಊರಿನವರನ್ನು, “ಏನಯಿಮಿನ ದಾರಿಯ ಬಳಿಯಲ್ಲಿ ಕುಳಿತಿದ್ದ ವೇಶ್ಯಾಸ್ತ್ರೀ ಎಲ್ಲಿರುವಳು” ಎಂದು ಕೇಳಿದ್ದಕ್ಕೆ ಅವರು, “ಇಲ್ಲಿ ಯಾವ ವೇಶ್ಯಾಸ್ತ್ರೀಯೂ ಇಲ್ಲ” ಎಂದರು.
Kannada BSI Bible 2016
ಅದುಲ್ಲಾಮ್ಯನು ಆಕೆಯ ಊರಿನವರನ್ನು--ಬಹಿರಂಗ ಮಾರ್ಗದ ಬಳಿಯಲ್ಲಿದ್ದ ಸೂಳೆ ಎಲ್ಲಿ ಎಂದು ಕೇಳಿದಾಗ ಅವರು--ಈ ಸ್ಥಳದಲ್ಲಿ ಯಾವ ಸೂಳೆಯೂ ಇರಲಿಲ್ಲ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವಳ ಊರಿನವರನ್ನು - ಏನಯಿವಿುನ ಸಮೀಪದಲ್ಲಿ ದಾರಿಯ ಬಳಿಯಲ್ಲಿ ಕೂತಿದ್ದ ದೇವದಾಸಿ ಎಲ್ಲಿರುವಳು ಎಂದು ಕೇಳಿದ್ದಕ್ಕೆ ಅವರು - ಇಲ್ಲಿ ಯಾವ ದೇವದಾಸಿಯೂ ಇಲ್ಲ ಅಂದರು.
Kannada Bible (KNCL) BSI 2016
ಅವನು ಅವಳ ಊರಿನವರನ್ನು, “ಏನಯಿಮ್ ಬಳಿ ದಾರಿಪಕ್ಕದಲ್ಲಿ ಕುಳಿತಿದ್ದ ವೇಶ್ಯೆ ಎಲ್ಲಿ?” ಎಂದು ವಿಚಾರಿಸಿದನು. ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ,” ಎಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದುಲ್ಲಾಮ್ಯನು ಆಕೆಯ ಊರಿನವರನ್ನು, “ಏನಯಿಮಿನ ಬಹಿರಂಗ ಮಾರ್ಗದ ಬಳಿಯಲ್ಲಿದ್ದ ವೇಶ್ಯೆ ಎಲ್ಲಿ?” ಎಂದು ಕೇಳಿದಾಗ. ಅವರು, “ಈ ಸ್ಥಳದಲ್ಲಿ ಯಾವ ವೇಶ್ಯೆಯೂ ಇರಲಿಲ್ಲ,” ಎಂದರು.