Genesis 38:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.
Kannada BSI Bible 2016
ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೂದನು - ಇನ್ನು ಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು; ಅವಳು ನಿನಗೆ ಸಿಕ್ಕಲಿಲ್ಲವಷ್ಟೆ ಅಂದನು.
Kannada Bible (KNCL) BSI 2016
ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.