Genesis 38:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂರು ತಿಂಗಳಾದ ಬಳಿಕ, ಯಾರೋ ಒಬ್ಬನು ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ” ಎಂದು ತಿಳಿಸಿದನು. ಆಗ ಯೆಹೂದನು, “ಆಕೆಯನ್ನು ಎಳೆದುಕೊಂಡು ಹೋಗಿ ಸುಟ್ಟುಬಿಡಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.
Kannada BSI Bible 2016
ಹೆಚ್ಚುಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ--ನಿನ್ನ ಸೊಸೆಯಾದ ತಾಮಾರಳು ಜಾರತ್ವ ಮಾಡಿದ್ದಾಳೆ; ಜಾರತ್ವದಿಂದ ಗರ್ಭಿಣಿಯಾಗಿ ದ್ದಾಳೆ ಎಂದು ತಿಳಿಸಿದರು. ಆಗ ಯೆಹೂದನು--ಅವಳನ್ನು ಹೊರಗೆ ತನ್ನಿರಿ, ಅವಳು ಸುಡಲ್ಪಡಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನು ತನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ ಎಂಬ ವರ್ತಮಾನವನ್ನು ತಿಳಿದು - ಅವಳನ್ನು ಹೊರಗೆ ತನ್ನಿರಿ, ಸುಡಬೇಕಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.