Genesis 38:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಗಂಡಸರು ತಾಮಾರಳನ್ನು ಕೊಲ್ಲಲು ಆಕೆಯ ಬಳಿಗೆ ಹೋದರು. ಆದರೆ ಆಕೆ ತನ್ನ ಮಾವನಿಗೆ, “ನನ್ನನ್ನು ಗರ್ಭಿಣಿ ಮಾಡಿದವನು ಈ ವಸ್ತುಗಳ ಒಡೆಯ. ಈ ವಸ್ತುಗಳನ್ನು ನೋಡು! ಇವು ಯಾರವು? ಈ ಮುದ್ರೆಯೂ ದಾರವೂ ಯಾರವು? ಇದು ಯಾರ ಕೈಕೋಲು?” ಎಂಬ ಸಂದೇಶವನ್ನು ಹೇಳಿ ಕಳುಹಿಸಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯನ್ನು ಹೊರಕ್ಕೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಸಾಮಾನುಗಳನ್ನು ಕಳುಹಿಸಿ, ಇವು ಯಾವ ಮನುಷ್ಯನದೋ, ಅವನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು” ಎಂದು ಕೇಳಿಕೊಂಡಳು.
Kannada BSI Bible 2016
ಆಕೆಯನ್ನು ಹೊರಗೆ ತಂದಾಗ ಆಕೆಯು ತನ್ನ ಮಾವನಿಗೆ--ಇವು ಯಾವ ಮನುಷ್ಯನವೋ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದದರಿಂದ ಈ ಮುದ್ರೆಯೂ ಕಡಗಗಳೂ ಕೋಲೂ ಯಾರವೆಂದು ತಿಳಿದುಕೋ ಎಂದು ಕೇಳಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆಕೆಯನ್ನು ಹೊರಕ್ಕೆ ತಂದಾಗ ಆಕೆ ತನ್ನ ಮಾವನಿಗೆ ಆ ಒತ್ತೆಯ ಸಾಮಾನುಗಳನ್ನು ಕಳುಹಿಸಿ - ಇವು ಯಾವನವೋ ಆ ಮನುಷ್ಯನಿಂದಲೇ ನಾನು ಬಸುರಾಗಿದ್ದೇನೆ; ಮುದ್ರೆ, ದಾರ, ಕೋಲು ಇವುಗಳ ಗುರುತನ್ನು ತಿಳಿಯಬಹುದು ಎಂದು ಹೇಳಿಸಿದಳು.
Kannada Bible (KNCL) BSI 2016
ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.