Genesis 38:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದನು ಆ ವಸ್ತುಗಳನ್ನು ಗುರುತಿಸಿ, “ಆಕೆ ಸರಿಯಾದದ್ದನ್ನೇ ಮಾಡಿದ್ದಾಳೆ. ನಾನೇ ತಪ್ಪು ಮಾಡಿದೆ. ನಾನು ಆಕೆಗೆ ಮಾತುಕೊಟ್ಟಂತೆ ನನ್ನ ಮಗನಾದ ಶೇಲಹನನ್ನು ಆಕೆಗೆ ಕೊಡಬೇಕಿತ್ತು” ಎಂದು ಹೇಳಿದನು. ಆದರೆ ಯೆಹೂದನು ಆಕೆಯೊಡನೆ ಮತ್ತೆ ಮಲಗಿಕೊಳ್ಳಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದನು ಅವುಗಳ ಗುರುತನ್ನು ತಿಳಿದು, “ನಾನು, ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆ ಮಾಡಿಸಲಿಲ್ಲ. ಆದುದರಿಂದ ಆಕೆಯು ನನಗಿಂತಲೂ ನೀತಿವಂತಳು” ಎಂದು ಹೇಳಿದನು. ಅವನು ಪುನಃ ಆಕೆಯ ಸಹವಾಸ ಮಾಡಲಿಲ್ಲ.
Kannada BSI Bible 2016
ಆಗ ಯೆಹೂದನು ಅವುಗಳನ್ನು ಗುರುತಿಸಿ--ಆಕೆಯು ನನಗಿಂತ ನೀತಿವಂತಳು, ಯಾಕಂದರೆ ನಾನು ನನ್ನ ಮಗನಾದ ಶೇಲಹನಿಗೆ ಅವಳನ್ನು ಕೊಡಲಿಲ್ಲ ಅಂದನು. ಅವನು ಮತ್ತೆ ಆಕೆಯನ್ನು ಅರಿಯಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದನು ಅವುಗಳ ಗುರುತನ್ನು ತಿಳಿದು - ನಾನು ನನ್ನ ಮಗನಾದ ಶೇಲಹನನ್ನು ಆಕೆಗೆ ಮದುವೆಮಾಡಿಸಲಿಲ್ಲವಾದ್ದರಿಂದ ಆಕೆ ನನಗಿಂತಲೂ ನ್ಯಾಯವಾಗಿ ನಡೆದಳು ಎಂದು ಹೇಳಿದನು. ಅವನು ತಿರಿಗಿ ಆಕೆಯ ಸಹವಾಸ ಮಾಡಲಿಲ್ಲ.
Kannada Bible (KNCL) BSI 2016
ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.