Genesis 38:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಕೆಗೆ ಹೆರಿಗೆಯಾಗುವಾಗ ಒಂದು ಮಗು ತನ್ನ ಕೈಚಾಚಿತು. ದಾದಿಯು ಆ ಮಗುವಿನ ಕೈಗೆ ಕೆಂಪುದಾರವನ್ನು ಕಟ್ಟಿ, “ಮೊದಲನೆಯವನು” ಅಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.
Kannada BSI Bible 2016
ಸೂಲ ಗಿತ್ತಿಯು ಆ ಕೈಗೆ ಕೆಂಪು ನೂಲನ್ನು ಕಟ್ಟಿ--ಇವನು ಮೊದಲು ಹೊರಗೆ ಬಂದನು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಹೆರುವಾಗ ಒಂದು ಮಗುವು ಕೈಚಾಚಲು ಸೂಲಗಿತ್ತಿಯು - ಇದು ಮೊದಲಾಗಿ ಬಂದದ್ದು ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು. ಅದು ಕೈಯನ್ನು ಹಿಂದಕ್ಕೆ ತೆಗೆಯಲು ಅದರೊಡನೆ ಇದ್ದ ಮತ್ತೊಂದು ಶಿಶುವು ಹೊರಗೆ ಬಂತು.
Kannada Bible (KNCL) BSI 2016
ಆಕೆ ಹೆರುವಾಗ ಒಂದು ಮಗು ಕೈಚಾಚಿತು. ಸೂಲಗಿತ್ತಿ, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಹೆರುವಾಗ ಒಂದು ಮಗುವು ತನ್ನ ಕೈಚಾಚಿತು. ಆಗ ಸೂಲಗಿತ್ತಿಯು, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.