Genesis 38:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಳಿಕ ಮತ್ತೊಂದು ಮಗುವು ಹೊರಬಂದಿತು. ಆ ಮಗುವಿನ ಕೈಯಲ್ಲಿ ಕೆಂಪುದಾರವಿತ್ತು. ಅವರು ಅವನಿಗೆ “ಜೆರಹ” ಎಂದು ಹೆಸರಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ ಜೆರಹ” ಎಂದು ಹೆಸರಾಯಿತು.
Kannada BSI Bible 2016
ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹುಟ್ಟಿತು; ಅದಕ್ಕೆ ಜೆರಹ ಎಂದು ಹೆಸರಾಯಿತು.
Kannada Bible (KNCL) BSI 2016
ತರುವಾಯ ಕೈಗೆ ಕೆಂಪುನೂಲು ಕಟ್ಟಿಸಿಕೊಂಡ ಕೂಸು ಹುಟ್ಟಿತು. ಅದಕ್ಕೆ ‘ಜೆರಹ’ ಎಂದು ಹೆಸರಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.