Genesis 38:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯೆಹೂದನು ಏರನ ತಮ್ಮನಾದ ಓನಾನನಿಗೆ, “ಹೋಗು, ಸತ್ತುಹೋದ ನಿನ್ನ ಅಣ್ಣನ ಹೆಂಡತಿಗೆ ಗಂಡನಂತಿರು. ನಿನ್ನ ಮೂಲಕ ಆಕೆಯಲ್ಲಿ ಹುಟ್ಟುವ ಮಕ್ಕಳು ನಿನ್ನ ಅಣ್ಣನಾದ ಏರನ ಮಕ್ಕಳಾಗಿರಲಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅಣ್ಣನ ಹೆಂಡತಿಯನ್ನು ಮದುವೆಮಾಡಿಕೊಂಡು ಮೈದುನ ಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು” ಎಂದನು.
Kannada BSI Bible 2016
ಆಗ ಯೆಹೂದನು ಓನಾನನಿಗೆ--ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ ಅವಳನ್ನು ಮದುವೆಯಾಗಿ ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಯೆಹೂದನು ಓನಾನನಿಗೆ - ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನಧರ್ಮಕ್ಕೆ ಸರಿಯಾಗಿ ನಡೆದು ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು ಅಂದನು.
Kannada Bible (KNCL) BSI 2016
ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.