Genesis 38:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಮಾರಳಲ್ಲಿ ತನಗೆ ಹುಟ್ಟುವ ಮಕ್ಕಳು ತನ್ನವರಾಗುವುದಿಲ್ಲವೆಂದು ಅರಿತುಕೊಂಡು ಓನಾನನು ಆಕೆಯನ್ನು ಕೂಡಿದರೂ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಓನಾನನು ಈ ರೀತಿ ಆಗುವ ಸಂತಾನವು ತನ್ನದಾಗುವುದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಬಾರದೆಂದು ಯೋಚಿಸಿ ತನ್ನ ಅತ್ತಿಗೆಯೊಂದಿಗೆ ಸಂಗಮಿಸುವಾಗೆಲ್ಲಾ ಅವಳು ಗರ್ಭಧರಿಸದಂತೆ ತನ್ನ ವೀರ್ಯವನ್ನು ನೆಲದ ಮೇಲೆ ಸುರಿಸುತಿದ್ದನು.
Kannada BSI Bible 2016
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು ತನ್ನ ಅಣ್ಣನ ಹೆಂಡತಿಯ ಬಳಿಗೆ ಹೋದಾಗ ತನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡದ ಹಾಗೆ ತನ್ನ ವೀರ್ಯ ವನ್ನು ಭೂಮಿಯ ಮೇಲೆ ಚೆಲ್ಲಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.
Kannada Bible (KNCL) BSI 2016
ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.