Genesis 39:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಸೇಫನನ್ನು ಖರೀದಿಮಾಡಿದ ವ್ಯಾಪಾರಿಗಳು ಅವನನ್ನು ಈಜಿಪ್ಟಿಗೆ ತೆಗೆದುಕೊಂಡು ಬಂದು ಫರೋಹನ ಕಾವಲುಗಾರರ ನಾಯಕನಾದ ಪೋಟೀಫರನಿಗೆ ಮಾರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋಸೇಫನನ್ನು ಕ್ರಯಕ್ಕೆ ತೆಗೆದುಕೊಂಡು ಹೋಗಿದ್ದ ಇಷ್ಮಾಯೇಲರು ಐಗುಪ್ತ ದೇಶಕ್ಕೆ ಹೋದರು. ಅಲ್ಲಿ ಒಬ್ಬ ಐಗುಪ್ತ್ಯನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು. ಇವನು ಫರೋಹನ ಉದ್ಯೋಗಸ್ಥನು, ಐಗುಪ್ತರ ದಂಡಿನ ಮುಖ್ಯಸ್ಥನು ಆಗಿದ್ದ ಪೋಟೀಫರನು ಎಂಬುವನಾಗಿದ್ದನು.
Kannada BSI Bible 2016
ಯೋಸೇಫನನ್ನು ಐಗುಪ್ತಕ್ಕೆ ತಕ್ಕೊಂಡು ಹೋದರು. ಅವನನ್ನು ಅಲ್ಲಿಗೆ ತಕ್ಕೊಂಡು ಹೋದ ಇಷ್ಮಾಯೇಲ್ಯರ ಕೈಯಿಂದ ಐಗುಪ್ತದವನೂ ಫರೋಹನ ಉದ್ಯೋಗಸ್ಥನೂ ಮೈಗಾವಲಿನವನೂ ಅಧಿಪತಿಯೂ ಆದ ಪೋಟೀಫರನು ಅವನನ್ನು ಕೊಂಡುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋಸೇಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಐಗುಪ್ತದೇಶಕ್ಕೆ ಸೇರಿದಾಗ ಒಬ್ಬ ಐಗುಪ್ತದವನು ಅವನನ್ನು ಅವರಿಂದ ಕ್ರಯಕ್ಕೆ ತೆಗೆದುಕೊಂಡನು; ಇವನು ಯಾರಂದರೆ ಫರೋಹನ ಉದ್ಯೋಗಸ್ಥನೂ ಮೈಗಾವಲಿನವರ ದಳವಾಯಿಯೂ ಆಗಿದ್ದ ಪೋಟೀಫರನು.
Kannada Bible (KNCL) BSI 2016
ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.