Genesis 39:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸ್ತ್ರೀಯು ಪ್ರತಿದಿನವೂ ಯೋಸೇಫನನ್ನು ಒತ್ತಾಯಿಸಿದಳು. ಆದರೆ ಯೋಸೇಫನು ಆಕೆಯೊಂದಿಗೆ ಮಲಗಿಕೊಳ್ಳಲು ಒಪ್ಪಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವಳು ಯೋಸೇಫನ ಸಂಗಡ ಪ್ರತಿದಿನವೂ ಈ ಮಾತನ್ನು ಆಡಿದ್ದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯನ್ನು ಮೋಹಿಸುವುದಕ್ಕಾಗಲಿ, ಆಕೆಯ ಬಳಿಯಲ್ಲಿರುವುದಕ್ಕಾಗಲೀ ಒಪ್ಪಿಕೊಳ್ಳಲೇ ಇಲ್ಲ.
Kannada BSI Bible 2016
ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದಾಗ್ಯೂ ಅವನು ಅವಳ ಕೂಡ ಮಲಗುವದಕ್ಕಾದರೂ ಅವಳ ಹತ್ತಿರ ಇರುವದ ಕ್ಕಾದರೂ ಕಿವಿಗೊಡದೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಯೋಸೇಫನ ಸಂಗಡ ಪ್ರತಿ ದಿನವೂ ಈ ಮಾತನ್ನು ಆಡಿದಾಗ್ಯೂ ಅವನು ಅದಕ್ಕೆ ಕಿವಿಗೊಡದೆ ಆಕೆಯಲ್ಲಿ ಸಂಗಮಮಾಡುವದಕ್ಕಾಗಲಿ ಆಕೆಯ ಬಳಿಯಲ್ಲಿರುವದಕ್ಕಾಗಲಿ ಒಪ್ಪಿಕೊಳ್ಳಲೇ ಇಲ್ಲ.
Kannada Bible (KNCL) BSI 2016
ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.