Genesis 39:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ದಿನ ಯೋಸೇಫನು ತನ್ನ ಕೆಲಸದ ನಿಮಿತ್ತ ಮನೆಯೊಳಗೆ ಹೋದನು. ಆಗ ಮನೆಯಲ್ಲಿ ಇದ್ದವನು ಅವನೊಬ್ಬನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯೊಳಗೆ ಯಾವ ಸೇವಕರೂ ಇರಲಿಲ್ಲ.
Kannada BSI Bible 2016
ಹೀಗಿರುವಲ್ಲಿ ಅವನು ತನ್ನ ಕೆಲಸ ಮಾಡುವದಕ್ಕೆ ಮನೆಯನ್ನು ಪ್ರವೇಶಿಸಿದಾಗ ಮನೆಯವರಲ್ಲಿ ಒಬ್ಬರೂ ಮನೆ ಯಲ್ಲಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಒಂದು ದಿನ ಅವನು ತನ್ನ ಕೆಲಸದ ಮೇಲೆ ಮನೆಗೆ ಬಂದಾಗ ಮನೆಯವರಲ್ಲಿ ಯಾರೂ ಒಳಗೆ ಇಲ್ಲದಿರುವಲ್ಲಿ
Kannada Bible (KNCL) BSI 2016
ಇಂತಿರಲು, ಒಂದು ದಿನ ಜೋಸೆಫನು ತನ್ನ ಕೆಲಸದ ಮೇಲೆ ಬಂದಾಗ ಮನೆಯ ಸೇವಕರಾರೂ ಒಳಗೆ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡುಕೊಂಡು “ಹಾಸಿಗೆಗೆ ಬಾ,” ಎಂದು ಕರೆದಳು. ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ.