Genesis 39:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಧಣಿಯ ಹೆಂಡತಿಯು ಅವನ ಮೇಲಂಗಿಯನ್ನು ಹಿಡಿದುಕೊಂಡು, “ಬಾ ನನ್ನೊಂದಿಗೆ ಮಲಗಿಕೊ” ಎಂದು ಕರೆದಳು. ಕೂಡಲೇ ಯೋಸೇಫನು ತನ್ನ ಮೇಲಂಗಿಯನ್ನೇ ಬಿಟ್ಟು ಅಲ್ಲಿಂದ ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನೊಂದಿಗೆ ಸಂಗಮಿಸಲು ಬಾ” ಎಂದು ಕರೆಯಲು, ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಹೊರಗೆ ಓಡಿಹೋದನು.
Kannada BSI Bible 2016
ಆಗ ಆಕೆಯು ಅವನ ವಸ್ತ್ರವನ್ನು ಹಿಡುಕೊಂಡು--ನನ್ನ ಸಂಗಡ ಮಲಗು ಅಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಅವನ ಬಟ್ಟೆಯನ್ನು ಹಿಡಿದುಕೊಂಡು - ನನ್ನ ಸಂಗಮಕ್ಕೆ ಬಾ ಅನ್ನಲು ಅವನು ತನ್ನ ಬಟ್ಟೆಯನ್ನು ಆಕೆಯ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದನು.
Kannada Bible (KNCL) BSI 2016
“ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋಗಿಬಿಟ್ಟನಲ್ಲಾ!” ಎಂದುಕೊಂಡ ಆಕೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.