Genesis 39:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನ ವೈರಿಗಳನ್ನು ಹಾಕುವ ಒಂದು ಸೆರೆಮನೆಯಿತ್ತು. ಆದ್ದರಿಂದ ಪೋಟೀಫರನು ಯೋಸೇಫನನ್ನು ಆ ಸೆರೆಮನೆಗೆ ಹಾಕಿಸಿದನು. ಅಂದಿನಿಂದ ಯೋಸೇಫನು ಅಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೋಸೇಫನ ದಣಿಯು ಅವನನ್ನು ಹಿಡಿದು ಅರಸನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
Kannada BSI Bible 2016
ಆಗ ಯೋಸೇಫನ ಯಜಮಾನನು ಅವನನ್ನು ಹಿಡುಕೊಂಡು ರಾಜನ ಕೈದಿಗಳು ಬಂಧಿಸಲ್ಪಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಹಿಡಿಸಿ ಅರಸನು ಸೆರೆಯವರನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಹಾಕಿಸಿದನು. ಅಲ್ಲಿ ಯೋಸೇಫನು ಸೆರೆಯಲ್ಲಿ ಇರಬೇಕಾಯಿತು.
Kannada Bible (KNCL) BSI 2016
ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.