Genesis 39:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪೋಟೀಫರನು ಯೋಸೇಫನ ವಿಷಯದಲ್ಲಿ ತುಂಬ ಸಂತೋಷಪಟ್ಟು ಸ್ವಂತ ಸೇವಕನನ್ನಾಗಿ ಮಾಡಿಕೊಂಡನು; ಅಲ್ಲದೆ ಮನೆಯ ಮೇಲ್ವಿಚಾರಣೆಯನ್ನು ಒಪ್ಪಿಸಿಕೊಟ್ಟನು; ತನ್ನ ಆಸ್ತಿಗೆಲ್ಲಾ ಮೇಲಾಧಿಕಾರಿಯನ್ನಾಗಿ ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಅವನ ದಣಿಯು ಯೋಸೇಫನ ಮೇಲೆ ದಯೆ ಇಟ್ಟು, ಅವನನ್ನು ಸ್ವಂತ ಸೇವಕನನ್ನಾಗಿ ನೇಮಿಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
Kannada BSI Bible 2016
ಆದದರಿಂದ ಯೋಸೇಫನು ಅವನ ದೃಷ್ಟಿಯಲ್ಲಿ ಕೃಪೆಹೊಂದಿ ಅವನ ಸೇವೆಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮೇಲೆ ದಯೆ ಇಟ್ಟು ಅವನನ್ನು ಸ್ವಂತ ಸೇವಕನನ್ನಾಗಿ ನೇವಿುಸಿಕೊಂಡನು. ಇದಲ್ಲದೆ ಆ ದಣಿಯು ಅವನಿಗೆ ತನ್ನ ಮನೆಯಲ್ಲಿ ಪಾರುಪತ್ಯವನ್ನು ಕೊಟ್ಟು ತನ್ನ ಆಸ್ತಿಯನ್ನೆಲ್ಲಾ ಅವನ ವಶಕ್ಕೆ ಒಪ್ಪಿಸಿದನು.
Kannada Bible (KNCL) BSI 2016
ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.