Genesis 39:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸ್ವಲ್ಪ ಕಾಲದನಂತರ, ಯೋಸೇಫನ ಒಡೆಯನ ಹೆಂಡತಿಯು ಯೋಸೇಫನ ಮೇಲೆ ಆಸೆಪಟ್ಟಳು. ಒಂದು ದಿನ ಆಕೆ ಅವನಿಗೆ, “ನನ್ನೊಂದಿಗೆ ಮಲಗಿಕೊ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಯೋಸೇಫನ ದಣಿಯ ಹೆಂಡತಿಯು ಅವನನ್ನು ಮೋಹಿಸಿ “ನನ್ನ ಸಂಗಡ ಸಂಗಮಿಸಲು ಬಾ” ಎಂದಳು.
Kannada BSI Bible 2016
ಇವುಗಳಾದ ಮೇಲೆ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣುಹಾಕಿ--ನನ್ನ ಸಂಗಡ ಮಲಗು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಅವನ ದಣಿಯ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ ತನ್ನೊಡನೆ ಸಂಗಮಕ್ಕೆ ಕರೆದಳು.
Kannada Bible (KNCL) BSI 2016
ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. \ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.