Genesis 39:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.
Kannada BSI Bible 2016
ಆದರೆ ಅವನು ಅದಕ್ಕೆ ಒಪ್ಪದೆ ತನ್ನ ಯಜಮಾನನ ಹೆಂಡತಿಗೆ--ಇಗೋ, ನನ್ನ ಯಜಮಾನನು ತನ್ನ ಮನೆಯಲ್ಲಿರು ವದನ್ನು ತಿಳುಕೊಳ್ಳದೆ ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಒಪ್ಪದೆ - ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿ ನಾನು ಇರುವದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೆ ಇದ್ದಾನೆ;
Kannada Bible (KNCL) BSI 2016
ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.