Genesis 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಸಂಗಮಿಸಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು, “ನಾನು ಯೆಹೋವನ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ” ಎಂದು ಹೇಳಿದಳು.
Kannada BSI Bible 2016
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಿದನು. ಆಗ ಆಕೆಯು ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು--ನಾನು ಕರ್ತ ನಿಂದ ಒಬ್ಬ ಮನುಷ್ಯನನ್ನು ಪಡೆದಿದ್ದೇನೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪುರುಷನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತು - ಯೆಹೋವನ ಅನುಗ್ರಹದಿಂದ ಗಂಡುಮಗುವನ್ನು ಪಡೆದಿದ್ದೇನೆ ಎಂದು ಹೇಳಿದಳು.
Kannada Bible (KNCL) BSI 2016
ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.