Genesis 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.
Kannada BSI Bible 2016
ನೀನು ಭೂಮಿಯನ್ನು ವ್ಯವಸಾಯಮಾಡುವಾಗ ಇನ್ನು ಮೇಲೆ ಅದು ತನ್ನ ಸಾರವನ್ನು ಕೊಡುವದಿಲ್ಲ. ನೀನು ಭೂಮಿಯಲ್ಲಿ ಅಲೆದಾಡುವವನಾಗಿಯೂ ತಿರುಗಾಡು ವವನಾಗಿಯೂ ಇರುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಭೂವಿುಯನ್ನು ವ್ಯವಸಾಯ ಮಾಡಿದರೂ ಇದು ಇನ್ನು ಮುಂದೆ ನಿನಗೆ ಫಲಿಸುವದಿಲ್ಲ. ನೀನು ಭೂಲೋಕದಲ್ಲಿ ಅಲೆಯುವವನೂ ದೇಶಭ್ರಷ್ಟನೂ ಆಗಿರುವಿ ಅಂದನು.
Kannada Bible (KNCL) BSI 2016
ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.