Genesis 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೋವನು, “ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವುದು” ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವನು ಅವನ ಮೇಲೆ ಒಂದು ಗುರುತನ್ನು ಇಟ್ಟನು.
Kannada BSI Bible 2016
ಆದದರಿಂದ ಕರ್ತನು ಅವನಿಗೆ--ಕಾಯಿನನನ್ನು ಕೊಲ್ಲುವವನು ಯಾವನೋ ಅವನು ಏಳರಷ್ಟು ಪ್ರತಿದಂಡನೆ ಹೊಂದುವನು ಎಂದು ಹೇಳಿದನು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಕರ್ತನು ಅವನ ಮೇಲೆ ಒಂದು ಗುರುತು ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೋವನು - ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳರಷ್ಟು ಪ್ರತಿದಂಡನೆಯಾಗುವದು ಎಂದು ಹೇಳಿ ಅವನನ್ನು ಕಂಡವರು ಕೊಲ್ಲಕೂಡದಂತೆ ಅವನ ಮೇಲೆ ಒಂದು ಗುರುತಿಟ್ಟನು.
Kannada Bible (KNCL) BSI 2016
ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,\ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.