Genesis 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.
Kannada BSI Bible 2016
ಕಾಯಿನನು ಕರ್ತನ ಸನ್ನಿಧಿಯಿಂದ ಹೊರಟು ಏದೆನಿನ ಪೂರ್ವದಿಕ್ಕಿನಲ್ಲಿದ್ದ ನೋದು ಎಂಬ ದೇಶ ದಲ್ಲಿ ವಾಸಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಯಿನನು ಯೆಹೋವನ ಸನ್ನಿಧಾನದಿಂದ ಹೊರಟು ನೋದು ಎಂಬ ದೇಶದಲ್ಲಿ ವಾಸಿಸಿದನು; ಅದು ಏದೆನ್ ಸೀಮೆಗೆ ಮೂಡಲಲ್ಲಿರುವದು.
Kannada Bible (KNCL) BSI 2016
ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು\ ಎಂಬ ನಾಡಿನಲ್ಲಿ ವಾಸಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.